ಡೊಳ್ಳು [Dollu]
ಜನಪದ ಕಲೆಗಳಲ್ಲಿ ಗಂಡುಕಲೆ ಎನಿಸಿರುವ ಡೊಳ್ಳು ಕುಣಿತ ಪುರುಷರಿಗೆ ಮಿಸಲಾದ ಕಲೆ. ಒಳ್ಳೆಯ ಮೈಕಟ್ಠು ಮತ್ತು ಶಕ್ತಿ ಉಳ್ಳ ಕಲಾವಿದರು ಮಾತ್ರ ಈ ಕಲೆಯನ್ನು ಪ್ರದರ್ಶಿಸಬಲ್ಲರು. ಉತ್ತರ ಕರ್ನಾಟಕದ ಬಹುಪಾಲು ಜಿಲ್ಲೆಗಳು ಹಾಗೂ ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರಚಲಿತವಿರುವ ಡೊಳ್ಳೂ ಕುಣಿತ ತನ್ನ ವಿಶಿಷ್ಟವಾದ ನೃತ್ಯ ಶೈಲಿಗಳಿಂದ ಉಳಿದುಕೊಂಡು ಬಂದಿದೆ. ಡೊಳ್ಳು ಕುಣಿತ- ಒಂದು ಜನಪದ ಹಾಗೂ ಶಾಸ್ತ್ರೀಯ ಕಲೆ, ನೃತ್ಯ. ಡೊಳ್ಳು ಬಾರಿಸಿಕೊಂಡು ಕುಣಿಯುವುದರಿಂದ ಇದಕ್ಕೆ ಡೊಳ್ಳು ಕುಣಿತ ಎಂಬ ಹೆಸರು.
ಡೊಳ್ಳಿನ ಇತಿಹಾಸ ಮೂಲತಃ ಕುರುಬ ಜನಾಂಗದ ವಾದ್ಯವಾಗಿರುವ ಡೊಳ್ಳು ಹಳ್ಳಿಯ ಸಂಸ್ಕೃತಿ ಜೀವನದೊಂದಿಗೆ ಸಮರಸವಾಗಿ ಬೆರೆತುಕೊಂಡಿದೆ. ಡೊಳ್ಳಿನ ಉತ್ಪತ್ತಿಯ ಬಗ್ಗೆ ಹಲವು ಕಥೆಗಳು ರೂಡಿಯಲ್ಲಿರುವುದರಿಂದ ಅದರ ಬಗ್ಗೆ ಭಕ್ತಿ ಗೌರವಗಳು ವ್ಯಕ್ತವಾಗುತ್ತದೆ. ಡೊಳ್ಳಿನ ಉತ್ಪತ್ತಿಯ ಬಗ್ಗೆ ಪೌರಣಿಕ ಹಿನ್ನೆಲೆಯ ಒಂದು ವಿಚಿತ್ರ ಕತೆ ಹಿಗೀದೇ